March 1, 2021

ಬೆಂಗಳೂರು ವಿಮಾನ ನಿಲ್ದಾಣಕ್ಕೆ 2020 ಗುಡ್ ಕ್ವಾಲಿಟಿ ಅವಾರ್ಡ್

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಗಾತ್ರ ಮತ್ತು ಪ್ರದೇಶದ ಪ್ರಕಾರ ಅತ್ಯುತ್ತಮ ವಿಮಾನ ನಿಲ್ದಾಣಕ್ಕಾಗಿ ವಾರ್ಷಿಕ ವಿಮಾನ ನಿಲ್ದಾಣ ಸೇವಾ ಗುಣಮಟ್ಟ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಪ್ರಶಸ್ತಿಯನ್ನು ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ (ACI) ನೀಡಿದ್ದು ಸತತ ನಾಲ್ಕನೇ ವರ್ಷವೂ ಬೆಂಗಳೂರು ವಿಮಾನ ನಿಲ್ದಾಣವು ಈ ಪ್ರಶಸ್ತಿಯನ್ನು ಪಡೆದಿದೆ.

ಇದು ವರ್ಷಕ್ಕೆ 25 – 40 ಮಿಲಿಯನ್ ಪ್ರಯಾಣಿಕರನ್ನು ಹೊಂದಿರುವ ಅತ್ಯುತ್ತಮ ವಿಮಾನ ನಿಲ್ದಾಣವಾಗಿದೆ ಎಂದು ಗುರುತಿಸಲಾಗಿದೆ. ಪ್ರಯಾಣಿಕರ ಸಮೀಕ್ಷೆಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗಿದೆ.
2018 ಮತ್ತು 2019 ರಲ್ಲಿ ಆಗಮನ ಮತ್ತು ನಿರ್ಗಮನ ಎರಡಕ್ಕೂ ಎಎಸ್‌ಕ್ಯೂ ಪ್ರಶಸ್ತಿಯನ್ನು ಪಡೆದ ವಿಶ್ವದ ಏಕೈಕ ವಿಮಾನ ನಿಲ್ದಾಣ ಇದಾಗಿದೆ. ವಿಮಾನ ನಿಲ್ದಾಣ ಮತ್ತು ಅದರ ಸೌಲಭ್ಯಗಳು ಆರೋಗ್ಯಕರ ಮತ್ತು ಪ್ರಯಾಣಿಕರಿಗೆ ಸುರಕ್ಷಿತವಾಗಿದೆ ಎಂದು ACI ನಿಂದ “ಗ್ರಾಹಕರ ಧ್ವನಿ” ಎಂಬ ಮಾನ್ಯತೆಯನ್ನೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪಡೆದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!