ಕೊನೆಗೂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಸಿ.ಎಂ.ಇಬ್ರಾಹೀಂ

Prasthutha|

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು, ತಕ್ಷಣದಿಂದಲೇ ಪಕ್ಷದ ಪ್ರಾಥಮಿಕ ಸದಸ್ಯ ತೊರೆಯುವುದಾಗಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನ ವಿಪಕ್ಷ ನಾಯಕನ ಸ್ಥಾನವನ್ನು ಬಿ.ಕೆ.ಹರಿಪ್ರಸಾದ್ ಅವರಿಗೆ ನೀಡಿರುವುದನ್ನು ಪತ್ರದಲ್ಲಿ ಪ್ರಸ್ತಾಪಿಸಿರುವ ಅವರು, ತಮಗಿಂತ ಕಿರಿಯ ನಾಯಕನಾಗಿರುವ ಹರಿಪ್ರಸಾದ್ ಅವರಿಗೆ ಆ ಸ್ಥಾನ ನೀಡಿರುವುದು ಸರಿಯಲ್ಲ. ಈ ಬಗ್ಗೆ  ತನ್ನ ಅಸಮಾಧಾನವನ್ನು ತಮ್ಮ ಗಮನಕ್ಕೆ ತಂದಿದ್ದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಪತ್ರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಿಗೂ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.



Join Whatsapp