Home ಟಾಪ್ ಸುದ್ದಿಗಳು ದೂದ್ ಸಾಗರ- ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು

ದೂದ್ ಸಾಗರ- ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು

ಕಾರವಾರ: ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತುಸು ವ್ಯತ್ಯಯವಾಗಿದೆ.


ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ.


ಗೋವಾದ ವಾಸ್ಕೋದಿಂದ ಹೊಸಪೇಟೆ ಬಳಿಯ ಜಿಂದಲ್ ಕಂಪನಿಗೆ ಕಲ್ಲಿದ್ದಲು ಕೊಂಡೊಯ್ಯುತಿದ್ದ ರೈಲು ಇದಾಗಿದೆ.


ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Join Whatsapp
Exit mobile version