ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್ ರೈಲು

Prasthutha|

ಚಂಡೀಗಢ: ಗೂಡ್ಸ್ ರೈಲು ಹಳಿತಪ್ಪಿದ ಪರಿಣಾಮ 8 ಕಂಟೈನರ್ ಗಳು ಹಳಿಗೆ ಬಿದ್ದು, ರೈಲು ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಹರಿಯಾಣದ ಕರ್ನಾಲ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿತ್ತು ಎಂದು ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದ ಎಂಟು ಕಂಟೈನರ್ ಗಳು ಹಳಿಗೆ ಬಿದ್ದಿವೆ. ಘಟನೆಗೆ ಕಾರಣಗಳನ್ನು ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿದ್ದಾಗ ಕರ್ನಾಲ್ ನ ತಾರೋರಿ ಬಳಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.



Join Whatsapp