Home ಟಾಪ್ ಸುದ್ದಿಗಳು ಮಧ್ಯಪ್ರದೇಶ: ಹಳಿ ತಪ್ಪಿದ LPG ಸಾಗಿಸುತ್ತಿದ್ದ ಗೂಡ್ಸ್ ರೈಲು, ತಪ್ಪಿದ ಭಾರಿ ಅನಾಹುತ

ಮಧ್ಯಪ್ರದೇಶ: ಹಳಿ ತಪ್ಪಿದ LPG ಸಾಗಿಸುತ್ತಿದ್ದ ಗೂಡ್ಸ್ ರೈಲು, ತಪ್ಪಿದ ಭಾರಿ ಅನಾಹುತ

ಜಬಲ್ಪುರ: ಗ್ಯಾಸ್ ಫ್ಯಾಕ್ಟರಿಯೊಂದರಲ್ಲಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.


ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ರೈಲ್ವೆ ಅಧಿಕಾರಿಗಳು ಅಪಘಾತ ಪರಿಹಾರ ವಾಹನದೊಂದಿಗೆ ತಡರಾತ್ರಿ ಸ್ಥಳಕ್ಕೆ ತಲುಪಿದರು.


ರೇಕ್ ಗಳನ್ನು ಖಾಲಿ ಮಾಡಲು ಹೋದಾಗ ಗೂಡ್ಸ್ ರೈಲಿನಿಂದ ಎರಡು ವ್ಯಾಗನ್ ಗಳು ಎಲ್ ಪಿಜಿ ರೇಕ್ ಗಳು ಹಳಿತಪ್ಪಿದವು. ಜೂನ್ 2 ರಂದು ಒಡಿಶಾದ ಬಾಲಸೋರ್ ನಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿ ಇದುವರೆಗೆ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

Join Whatsapp
Exit mobile version