ಬೆಂಗಳೂರು: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ನೀಡಿದ ಹೇಳಿಕೆ ತಪ್ಪು ಮಾಹಿತಿಯಿಂದ ಕೂಡಿದೆ. ಅದು ಅವರ ಸ್ವಂತದ್ದಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ.ರಾಜೀವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೂಳಿಹಟ್ಟಿ ಶೇಖರ್ ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ಪ್ರೇರಣೆಗೆ ಒಳಗಾಗಿ ಈ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡವಿದೆ ಎಂದಿದ್ದಾರೆ.
ನಾನು ಒಬ್ಬ ದಲಿತನಾಗಿ ರಾಜಕಾರಣಕ್ಕೆ ಬಂದ ಮೇಲೆ ಆರೆಸ್ಸೆಸ್ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆ ರೀತಿ ಏನೂ ಆಗಿಲ್ಲ ಎಂದಿದ್ದಾರೆ. ಈ ಸಂಘಟನೆಯ ಕುರಿತು ಅರಿವಿಲ್ಲದೆ, ತಿಳಿದುಕೊಳ್ಳದೆ, ಅನುಭವಕ್ಕೆ ಬರಲಾಗದೆ ಇಂಥ ಮಾತು ಹೇಳುವುದು ತಪ್ಪು ಎಂದು ಎಂದು ಹೇಳಿದ್ದಾರೆ.