ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾನಿಂದ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳೊಂದಿಗೆ ಗೂಂಡಾ ವರ್ತನೆ ನಡೆದಿದೆ. ಅಕ್ರಮ ಕಲ್ಲು ಗಾಣಿಗರಿಕೆಗೆ ಮಾಡುತಿದ್ದ ಬಲಗೈ ಬಂಟ ಶಶಿರಾಜ್ ಶೆಟ್ಟಿ ಮತ್ತು ಬಂಟರನ್ನು ಬಂಧನ ಮಾಡಿದ್ದನ್ನು ಪ್ರಶ್ನಿಸಿ ಪೊಲೀಸ್ ಠಾಣೆಗೆ ನುಗ್ಗಿ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಶಾಸಕನ ಕ್ರಮವನ್ನು SDPI ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಕಟ್ಟೆ ತಿಳಿಸಿದ್ದಾರೆ.
ಬೆಳ್ತಂಗಡಿಯ ಮೆಲಂತಬೆಟ್ಟು ನಡೆಯುತ್ತಿದ್ದ ಅಕ್ರಮ ಕಲ್ಲಿನ ಕೋರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬೆಳ್ತಂಗಡಿ ಪೊಲೀಸರ ತಂಡ ಜಂಟಿ ಕಾರ್ಯಾಚರಣೆಯಲ್ಲಿ ದಾಳಿ ನಡೆಸಿದ್ದು, ಸ್ಫೋಟಕಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ.
ಪ್ರಸ್ತುತ ಘಟನೆಯನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಬೇಕು
ಪೊಲೀಸ್ ಠಾಣೆಗೆ ಗುಂಪು ಕಟ್ಟಿಕೊಂಡು ನುಗ್ಗಿ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಶಾಸಕನ ವಿರುದ್ಧ ಪ್ರಕರಣವನ್ನು ದಾಖಲಿಸುವ ಮೂಲಕ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.