ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಗೂಂಡಾ ರಾಜ್ಯ: ಮಲ್ಲಿಕಾರ್ಜುನ ಖರ್ಗೆ

Prasthutha|

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ‘ಗೂಂಡಾ ರಾಜ್ಯ’ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -

ಫೇಸ್‌ಬುಕ್ ಲೈವ್ ವೇಳೆ ನಾಯಕನ ಗುಂಡಿಕ್ಕಿ ಹತ್ಯೆ ಮತ್ತು ಪತ್ರಕರ್ತರೊಬ್ಬರ ಕಾರಿನ ಮೇಲೆ ದಾಳಿ ನಡೆಸಿದ ಘಟನೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಮಹಾರಾಷ್ಟ್ರದಲ್ಲಿ ಕಾನೂನು ನೆಲೆನಿಂತಿತ್ತು. ಹಾಗಾಗಿ ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗಿತ್ತು ಎಂದು ಖರ್ಗೆ ಹೇಳಿದ್ದಾರೆ.

- Advertisement -

ED ಬಲದಿಂದ ರಚನೆಗೊಂಡ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಗೂಂಡಾ ರಾಜ್ಯದ ಮೂಲಕ ಜನರ ಭದ್ರತೆಯೊಂದಿಗೆ ಆಟವಾಡುತ್ತಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp