ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯಿದೆ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರವು ತನ್ನ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆಯಡಿ (ಕೋಕಾ- ಕೆಸಿಒಸಿಎ) ಆಗಸ್ಟ್ 17ರಂದು ಹೊರಡಿಸಿರುವ ಆದೇಶಗಳನ್ನು ವಜಾ ಮಾಡುವಂತೆ ಪುನೀತ್ ಕೆರೆಹಳ್ಳಿ ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯವು ರಾಜ್ಯ ಸರ್ಕಾರ, ನಗರ ಪೊಲೀಸ್ ಆಯುಕ್ತರು ಒಳಗೊಂಡು ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.