ರಾಷ್ಟ್ರಪಿತನ ಮೊಮ್ಮಗ ರಾಷ್ಟ್ರಪತಿ…?

Prasthutha|

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯವರ ಹೆಸರನ್ನು ಪ್ರತಿಪಕ್ಷಗಳು ಸೂಚಿಸಿದ್ದು, ಅವರು ತಮ್ಮ ನಿರ್ಧಾರ ತಿಳಿಸಲು ಸಮಯ ಕೋರಿದ್ದಾರೆ ಎಂದು ತಿಳಿದು ಬಂದಿದೆ.
ಗೋಪಾಲಕೃಷ್ಣ ಗಾಂಧಿ (77) ಅವರು ಮಹಾತ್ಮಾ ಗಾಂಧಿ ಮತ್ತು ಸಿ. ರಾಜಗೋಪಾಲಾಚಾರಿ ಅವರ ಮೊಮ್ಮಗ. ದಕ್ಷಿಣ ಆಫ್ರಿಕಾ, ಶ್ರೀಲಂಕಾದಲ್ಲಿ ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು. ಗೋಪಾಲಕೃಷ್ಣ ಗಾಂಧಿ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ನಾಮ ನಿರ್ದೇಶನ ಮಾಡುವ ಸಲುವಾಗಿ ವಿಪಕ್ಷಗಳು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ಕುರಿತು ಯೋಚಿಸಿ ನಿರ್ಧರಿಸಿ ಬಳಿಕ ತಿಳಿಸಲಾಗುವುದು ಎಂಬುದಾಗಿ ಗೋಪಾಲಕೃಷ್ಣ ಗಾಂಧಿಯವರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp