Home ಟಾಪ್ ಸುದ್ದಿಗಳು ಫೆ.27, 28ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

ಫೆ.27, 28ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಫೆಬ್ರವರಿ 27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಬೆಂಗಳೂರು ನೌಕರರಿಗೆ ಫೆ.27ರಂದು ರಜೆ ನೀಡಿದರೆ, ಇತರೆ ಬೇರೆ-ಬೇರೆ ಜಿಲ್ಲೆಗಳಿಂದ ಬರುವ ನೌಕರರಿಗೆ ಎರಡು ದಿನ ಅಂದರೆ ಫೆ.27 ಮತ್ತು 28ರಂದು ರಜೆ ನೀಡಲಾಗಿದೆ.
ಬೆಂಗಳೂರು ನಗರದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ (ಗೇಟ್ ನಂ.1) ಫೆ. 27ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದೆ. ಇದರಲ್ಲಿ ಲಕ್ಷಾಂತರ ನೌಕರರು ಭಾಗಿಯಾಗುವ ನಿರೀಕ್ಷೆ ಇದೆ. ಹೀಗಾಗಿ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗಲು ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

Join Whatsapp
Exit mobile version