Home ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ನೌಕರರ ಮುಷ್ಕರ: ಸೇವೆಯಲ್ಲಿ ವ್ಯತ್ಯಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ನೌಕರರ ಮುಷ್ಕರ: ಸೇವೆಯಲ್ಲಿ ವ್ಯತ್ಯಯ

ಮಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ರಾಜ್ಯಾದ್ಯಂತ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಸೇವೆಗಳು ಬಹುತೇಕ ಬಂದ್ ಆಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿವೆ.


ಮಂಗಳೂರಿನ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ನೌಕಕರು ಗೇಟ್’ಗೆ ಬೀಗ ಹಾಕಿರುವುದರಿಂದ ನೌಕರರಲ್ಲಿ ಗೊಂದಲ ಉಂಟಾಗಿದೆ.


ಅಲ್ಲದೆ, ಲೋಕೋಪಯೋಗಿ ಇಲಾಖೆ ಮತ್ತು ವಾಣಿಜ್ಯ ತೆರಿಗೆಗಳ ಇಲಾಖೆ, ತಾಲೂಕು ಪಂಚಾಯತ್ ಕಚೇರಿ, ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ಸೇವೆ ಲಭ್ಯವಾಗುತ್ತಿಲ್ಲ. ನೌಕರರು ಸ್ವಯಂ ಪ್ರೇರಿತ ರಜೆ ಹಾಕಿದ್ದು, ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಶಾಲಾ ಮಕ್ಕಳಲ್ಲಿ ತರಗತಿ ನಡೆಯುವುದರ ಬಗ್ಗೆ ಗೊಂದಲವಿದ್ದು, ಕೆಲ ಶಾಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

Join Whatsapp
Exit mobile version