ಎರಡು ಅಥವಾ ಕಡಿಮೆ ಮಕ್ಕಳಿರುವವರಿಗೆ ಮಾತ್ರ ಸರಕಾರಿ ಸೌಲಭ್ಯ | ಕರಡು ಮಸೂದೆ ಸಿದ್ಧ

Prasthutha: June 24, 2021

ಉತ್ತರ ಪ್ರದೇಶ : ದೇಶದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಿಸಲಿರುವುದರಿಂದ ಎರಡು ಮಕ್ಕಳ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಉತ್ತರಪ್ರದೇಶ ರಾಜ್ಯ ಕಾನೂನು ಆಯೋಗವು ಈ ನಿಟ್ಟಿನಲ್ಲಿ ಕಾನೂನು ಜಾರಿಗೆ ತರುವ ಉದ್ದೇಶದಿಂದ ಕರಡು ಮಸೂದೆಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿದೆ. ಪ್ರಸ್ತಾವಿತ ಕಾನೂನಿನಂತೆ ಎರಡು ಅಥವಾ ಕಡಿಮೆ ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಸರಕಾರದ ಯೋಜನೆಗಳ ಪ್ರಯೋಜನ ದೊರಕುವಂತೆ ಮಾಡುವ ಯೋಜನೆಯಿದೆ ಎಂದು ವರದಿಗಳು ತಿಳಿಸಿವೆ.

ಈ ಪ್ರಸ್ತಾವಿತ ಕಾನೂನಿನ ಕುರಿತು ಉತ್ತರ ಪ್ರದೇಶ ಸರಕಾರ ಇನ್ನೂ ಏನನ್ನೂ ಹೇಳಿಲ್ಲದೇ ಇದ್ದರೂ ರಾಜ್ಯ ಕಾನೂನು ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಮಿತ್ತಲ್ ಈ ಕುರಿತು ಸುಳಿವು ನೀಡಿದ್ದಾರಲ್ಲದೆ ಕರಡು ಮಸೂದೆ ತಯಾರಿಸಲು ಆರಂಭಿಕ ಕೆಲಸ ಕಾರ್ಯಗಳು ಹಾಗೂ ಚರ್ಚೆಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ.

ಸಂಬಂಧಿತರೆಲ್ಲರ ಜತೆ ಚರ್ಚೆ ನಡೆಸಿ ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಕರಡು ಸಿದ್ಧಪಡಿಸಲು ಕನಿಷ್ಠ ಎರಡು ತಿಂಗಳು ಬೇಕಾಗಬಹುದು ಎಂದು ಅವರು ಹೇಳಿದ್ದಾರೆ. ಉತ್ತರಪ್ರದೇಶದ ಜನಸಂಖ್ಯೆ 22 ಕೋಟಿಯಾಗಿದ್ದು ಇದು ಹಲವಾರು ದೇಶಗಳ ಜನಸಂಖ್ಯೆಗಿಂತಲೂ ಹೆಚ್ಚಾಗಿರುವುದರಿಂದ ಇಂತಹ ಒಂದು ಕಾನೂನು ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಕೆಲ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಹಲವು ವಿಚಾರಗಳೊಂದಿಗೆ ಈ ಕರಡು ಮಸೂದೆ ಕೂಡ ಚರ್ಚೆಯಾಗಿದೆಯೆನ್ನಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ