Home ಕರಾವಳಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಿಸಿದ ಸರಕಾರ

ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಿಸಿದ ಸರಕಾರ

ಬೆಂಗಳೂರು : ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ ಬಳಸಲು ಆಗಲಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16 ರಿಂದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.

ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಿಗೆ ಅ.16ರಿಂದ 18ರ ವರೆಗೆ ಅವಕಾಶ ನೀಡಲಾಗಿದೆ.

ಅ. 19 ರಿಂದ 21 ರವರೆಗೆ ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ.

Join Whatsapp
Exit mobile version