Home ಟಾಪ್ ಸುದ್ದಿಗಳು ಔಷಧಿಗಳ ಬೆಲೆಯಲ್ಲಿ ಸರ್ಕಾರದ ಪಾತ್ರವಿಲ್ಲ: ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ

ಔಷಧಿಗಳ ಬೆಲೆಯಲ್ಲಿ ಸರ್ಕಾರದ ಪಾತ್ರವಿಲ್ಲ: ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ

ಹೊಸದಿಲ್ಲಿ:  ಕೇಂದ್ರ ಸರ್ಕಾರವು ಅಗತ್ಯ ಔಷಧಿಗಳ ಬೆಲೆಯನ್ನು ಹೆಚ್ಚಿಸಿಲ್ಲ. ಔಷಧಿಗಳ ಬೆಲೆಯಲ್ಲಿ ಸರ್ಕಾರದ ಪಾತ್ರವಿಲ್ಲ. ಬೆಲೆಗಳನ್ನು ಹೆಚ್ಚಿಸುವ ಯಾವುದೇ ಯೋಜನೆಯೂ ಇಲ್ಲ  ಎಂದು ಆರೋಗ್ಯ ಸಚಿವ ಮನ್ಸುಖ್  ಮಾಂಡವಿಯ ಹೇಳಿದ್ದಾರೆ.

ಔಷಧ ಬೆಲೆ ನಿಗದಿ ಪ್ರಾಧಿಕಾರವು ಔಷಧಗಳ ಬೆಲೆಗಳನ್ನು ಹೆಚ್ಚಿಸಲು ಅನುಮತಿ ನೀಡಿದ್ದು, ಸಗಟು ಬೆಲೆ ಸೂಚ್ಯಂಕಕ್ಕೆ ಸಂಬಂಧಿಸಿದಂತೆ ಶೇ.10.7ರಷ್ಟು ಬೆಲೆ ಏರಿಕೆಗೆ ಶಿಫಾರಸು ಮಾಡಿದೆ. ವಾಣಿಜ್ಯ ಸಚಿವಾಲಯದೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಅಗತ್ಯ ಔಷಧಿಗಳ ಬೆಲೆಯನ್ನು ಸರ್ಕಾರವು ನಿಯಂತ್ರಿಸುವುದಿಲ್ಲ .ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಔಷಧಿಯ ಬೆಲೆಯನ್ನು ನಿಗದಿಪಡಿಸಲಾಗುತ್ತದೆ. ಸಗಟು ಬೆಲೆ ಸೂಚ್ಯಂಕವು ಹೆಚ್ಚಾದಾಗ, ಔಷಧಿಗಳ ಬೆಲೆಯೂ ಹೆಚ್ಚಾಗುತ್ತದೆ ಎಂದು ಸಚಿವರು ಹೇಳಿದರು.

ಪ್ಯಾರಾಸಿಟಮಾಲ್ ಸೇರಿದಂತೆ ಜ್ವರ, ಸೋಂಕು, ಹೃದ್ರೋಗ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳಿಗೆ ಔಷಧಿಗಳ ಬೆಲೆಗಳು ಹೆಚ್ಚಾಗಿದೆ. ಪ್ಯಾರಾಸಿಟಮಾಲ್ ಮತ್ತು ಅಜಿಥ್ರೋಮೈಸಿನ್ ನಂತಹ800 ಕ್ಕೂ ಹೆಚ್ಚು ಔಷಧಿಗಳ ಬೆಲೆಗಳು ಶೇಕಡಾ 10.7 ರಷ್ಟು ಹೆಚ್ಚಾಗಿದೆ.

Join Whatsapp
Exit mobile version