6 ನಿಗಮಗಳಿಗೆ ನಿರ್ದೇಶಕರ ನೇಮಿಸಿ ಆದೇಶ ಹೊರಡಿಸಿದ ಸರ್ಕಾರ

Prasthutha|

ಬೆಂಗಳೂರು: ಚುನಾವಣೆ ಘೋಷಣೆಗೆ ಒಂದು ತಿಂಗಳು ಬಾಕಿ ಇರುವಂತೆಯೇ 6 ನಿಗಮಗಳಿಗೆ ಒಟ್ಟು 11 ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆದೇಶಿಸಲಾಗಿದೆ.

- Advertisement -

ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ 11 ಜನರನ್ನು ನಿರ್ದೇಶಕರಾಗಿ ನೇಮಕ ಮಾಡಿದೆ. ಅದರಲ್ಲಿಯೂ ಶಿಗ್ಗಾಂವಿ ವ್ಯಾಪ್ತಿಯ 6 ಜನರಿಗೆ ಸ್ಥಾನ ನೀಡಲಾಗಿದೆ. ದೇವರಾಜ ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಮತ್ತು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

Join Whatsapp
Exit mobile version