ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ: ಸರ್ಕಾರಿ ಅಧಿಕಾರಿಯ ಟೇಬಲ್ ಬೋರ್ಡ್ ವೈರಲ್

Prasthutha|

ಹಾಸನ: ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿಕೊಂಡ ಸರ್ಕಾರಿ ಅಧಿಕಾರಿಯೊಬ್ಬರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ.

- Advertisement -


ಹಾಸನ ಬಿಇಒ ಕಚೇರಿಯ ಅಧೀಕ್ಷರಾಗಿರುವ ಡಿ.ಎಸ್.ಲೋಕೇಶ್ ತಮ್ಮ ಟೇಬಲ್ ಮೇಲೆ ‘ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ’ ಎನ್ನುವ ಬೋರ್ಡ್ ಹಾಕಿರುವುದು ಗಮನ ಸೆಳೆದಿದೆ. ಲೋಕೇಶ್ ಅವರು ತಮ್ಮ ಪ್ರಾಮಾಣಿಕತೆ ಹಾಗೂ ದಕ್ಷತೆಯ ಕಾರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಸನ ಸಂಸದರಾಗಿದ್ದ ಅವಧಿಯಲ್ಲಿ ಅವರ ಕಚೇರಿಯ ಆಪ್ತ ಕಾರ್ಯದರ್ಶಿಯಾಗಿದ್ದರು. ಇದೀಗ ಪ್ರಮೋಷನ್ ಪಡೆದು ಬಿಇಓ ಕಛೇರಿಯ ಅಧೀಕ್ಷರಾಗಿದ್ದು ಅವರು ಕರ್ತವ್ಯ ಆರಂಭಿಸಿದ ದಿನದಿಂದ ಹೀಗೊಂದು ಬೋರ್ಡ್ ಹಾಕಿಕೊಂಡು ಕೆಲಸ ಮಾಡುತ್ತಿರುವುದು ಎಲ್ಲರ ಗಮನ ಸೆಳೆದಿದೆ.

Join Whatsapp