ದುಡಿಯುವ ವರ್ಗಗಳ ನೆರವಿಗೆ ಧಾವಿಸದೆ ಸರ್ಕಾರ ಕೇವಲ ಕೋವಿಡ್ ಕರ್ಫ್ಯೂ ಘೋಷಣೆ ಮಾಡಿದೆ : ಕೆಪಿಸಿಸಿ ವಕ್ತಾರ ಶೌವಾದ್ ಗೂನಡ್ಕ

Prasthutha|

ಕೋವಿಡ್ 19 ಹರಡುವುದನ್ನು ತಡೆಗಟ್ಟಲು  ಸರ್ಕಾರದ ಜೊತೆ ನಾವೆಲ್ಲರೂ ಜೊತೆಯಾಗಿ ಕಾರ್ಯನಿರ್ವಹಿಸಬೇಕು.  ಆದರೆ ರಾಜ್ಯ ಸರ್ಕಾರವು ಆಟೋರಿಕ್ಷಾ, ಟ್ಯಾಕ್ಸಿ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಹಲವು ವರ್ಗದ ಕಾರ್ಮಿಕರ ನೆರವಿಗೆ ಧಾವಿಸದೆ ಕೇವಲ ಕೋವಿಡ್ ಕರ್ಫ್ಯೂ ಘೋಷಣೆ ಮಾಡಿ ಆದೇಶಿಸಿರುವುದು ಸರಿಯಲ್ಲ. ಈಗಾಗಲೇ ಕೋವಿಡ್ ನಿಂದಾಗಿ ಹಲವಾರು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಈ ಅಘೋಷಿತ ಲಾಕ್ ಡೌನ್ ಆ ಕುಟುಂಬಗಳನ್ನು ಮತ್ತಷ್ಟು ಸಮಸ್ಯೆಗೆ ದೂಡುತ್ತದೆಂದು ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಬಾರಿ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಸರ್ಕಾರದಿಂದ ನೀಡುವುದಾಗಿ ಘೋಷಿಸಿದ 5,000 ರೂ.ಮೊತ್ತದ ಸಹಾಯಧನ ಯೋಜನೆಯು ಸಮರ್ಪಕವಾಗಿ ಜಾರಿಯಾಗಿಲ್ಲ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಒಂದು ಕಡೆಯಾದರೆ ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ವರ್ಗ ಇನ್ನೊಂದು ಕಡೆ.ಇಂತಹವರ ಪರ ರಾಜ್ಯ ಸರ್ಕಾರವು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.

- Advertisement -