ಕಲಬುರಗಿ: ಉಕ್ರೇನ್’ನಲ್ಲಿ ಯುದ್ಧದ ಸನ್ನಿವೇಶದ ಬಗ್ಗೆ ಮಾಹಿತಿ ಇದ್ದರೂ ಭಾರತ ಸರ್ಕಾರ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಬಳಸಿಕೊಂಡು ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕರೆತರುವಲ್ಲಿ ಆರಂಭದಲ್ಲೇ ಎಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸ್ನೇಹವನ್ನು ಬಳಸಿಕೊಂಡು ಮುಂಚೆಯೇ ಅಗತ್ಯವಿರುವಷ್ಟು ವಿಮಾನಗಳನ್ನು ಕಳಿಸಿ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಕರೆಸಿಕೊಂಡಿದ್ದರೆ ಇಷ್ಟೊಂದು ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಹೇಳಿದರು.