ದಾವಣಗೆರೆ: ಕರಾವಳಿ ಮತ್ತು ಒಳನಾಡು ಮೀನುಗಾರಿಕೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನೂತನವಾಗಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ ಎಂದು ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿಂದು ವಿವಿಧ ಮೀನುಗಾರಿಕಾ ಘಟಕಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕರಾವಳಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ, ಬಂದರು ಅಭಿವೃದ್ಧಿ, ಬೋಟು ನಿಲ್ದಾಣಗಳ ನಿರ್ಮಾಣ, ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದು ಪ್ರಧಾನಮಂತ್ರಿಗಳ ಆಶಯವಾಗಿದ್ದು, ಇದಕ್ಕಾಗಿ ಈ ಬಾರಿ 1 ಸಾವಿರದ 200 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಸಾಗರ ಮಾಲಾ, ಮತ್ಸ್ಯ ಸಂಪದ ಯೋಜನೆಯಡಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಅಂಗಾರ ಹೇಳಿದರು.