ಜಂಬೂಸವಾರಿಗೆ ರಾಜ್ಯಪಾಲರು ಗೈರು

Prasthutha|

ಮೈಸೂರು: ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಸರಾ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, “ಸಂಪ್ರದಾಯದಂತೆ ರಾಜ್ಯಪಾಲರು ಪ್ರತಿ ವರ್ಷ ದಸರಾ ಮಹೋತ್ಸವದ ಪಂಜಿನ ಕವಾಯತಿನಲ್ಲಿ ಭಾಗವಹಿಸಬೇಕಿತ್ತು. ಆದರೆ, ಅವರಿಗೆ ಕೋವಿಡ್ ಸೋಂಕಾಗಿರುವ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ,” ಎಂದು ಹೇಳಿದರು.




Join Whatsapp