ರಾತ್ರಿಯೇ ಈಶ್ವರಪ್ಪ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು !

Prasthutha|

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಶುಕ್ರವಾರ ರಾತ್ರಿಯೇ ಅಂಗೀಕರಿಸಲಾಗಿದೆ.

- Advertisement -

ರಾತ್ರಿ ಸುಮಾರು 12 ಗಂಟೆಗೆ ಈಶ್ವರಪ್ಪ ರಾಜೀನಾಮೆ ಅಂಗೀಕಾರವಾಗಿದೆ. ಮಧ್ಯಪ್ರದೇಶದ ಇಂದೋರ್ ನಲ್ಲಿದ್ದ ರಾಜ್ಯಪಾಲರು ಇ-ಮೇಲ್ ಮೂಲಕ ಈಶ್ವರಪ್ಪ ರಾಜೀನಾಮೆ ಪತ್ರವನ್ನು ತರಿಸಿಕೊಂಡಿದ್ದರು. ತಡರಾತ್ರಿಯೇ ತರಾತುರಿಯಲ್ಲಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ.

ಬೆಳಗಾವಿ ಮೂಲದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತ ಸಂತೋಷ್ ಪಾಟೀಲ್ ಈ ಹಿಂದೆಯೇ ಈಶ್ವರಪ್ಪ ವಿರುದ್ಧ ಶೇಕಡಾ 40ರಷ್ಟು ಭ್ರಷ್ಟಾಚಾರದ ಆರೋಪ ಹೊರಿಸಿದ್ದರು.

Join Whatsapp