ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ: ಹಂಗಾಮಿ ಸಿಎಂ ಆಗಿ ಮುಂದುವರಿಯಲು ಸೂಚನೆ

Prasthutha|

ಬೆಂಗಳೂರು, ಜು.26: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಮಧ್ಯಾಹ್ನ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಗೀಕರಿಸಿದ್ದಾರೆ.
ಮುಂದಿನ ಮುಖ್ಯಮಂತ್ರಿ ಆಯ್ಕೆಯವರೆಗೆ ತಾವು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

- Advertisement -


ವಿಧಾನಸೌಧದಲ್ಲಿ ಇಂದು ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಕಾರಿನಲ್ಲಿ ತೆರಳಿ, ರಾಜೀನಾಮೆ ಪತ್ರವನ್ನು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.
ಇದೀಗ ರಾಜಕೀಯ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿರುವ ರಾಜಭವನ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ. 

ನಾಲ್ಕು ಬಾರಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ್ದ ಯಡಿಯೂರಪ್ಪ, ಎರಡು ಬಾರಿ ಒಂದೆರಡು ದಿನಗಳಲ್ಲಿಯೇ ರಾಜೀನಾಮೆ ನೀಡಬೇಕಾಯಿತು. ಮತ್ತೆರಡು ಬಾರಿ ಮುಖ್ಯಮಂತ್ರಿ ಆಗಿ ಎರಡು ವರುಷ ಬಾಳಿದರೂ ಹೊರತು ಅವಧಿ ಪೂರೈಸಿರಲಿಲ್ಲ.

Join Whatsapp