ಕುಲಾಧಿಪತಿ ಹುದ್ದೆಯಿಂದ ನಾನು ಕೆಳಗಿಳಿಯುತ್ತೇನೆ, ನೀವೇ ಅದನ್ನು ನಿರ್ವಹಿಸಿ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್

Prasthutha: December 11, 2021

ತಿರುವನಂತಪುರಂ: ಕೇರಳದ ಉನ್ನತ ಶಿಕ್ಷಣ ಕ್ಷೇತ್ರ, ರಾಜ್ಯದ ವಿಶ್ವವಿದ್ಯಾಲಯಗಳ ಉಪ-ಕುಲಪತಿ ಹುದ್ದೆಯಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯುತ್ತಿರುವ ಬಗ್ಗೆ ರಾಜ್ಯಪಾಲ, ಯೂನಿವರ್ಸಿಟಿಗಳ ಕುಲಾಧಿಪತಿಯೂ ಆಗಿರುವ ಆರಿಫ್​ ಮುಹಮ್ಮದ್​ ಖಾನ್​ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದಿದ್ದಾರೆ. 

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜಕೀಯ ಹಸ್ತಕ್ಷೇಪ ಹೀಗೆ ಮುಂದುವರಿದರೆ ನಾನು ಕುಲಾಧಿಪತಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಆ ಸ್ಥಾನವನ್ನು ನೀವೇ ವಹಿಸಿಕೊಳ್ಳಿ ಎಂದು ಹೇಳಿದ್ದಾರೆ.

ರಾಜ್ಯದ ಉನ್ನತ ಯೂನಿವರ್ಸಿಟಿಗಳ ಉಪಕುಲಪತಿಗಳ ನೇಮಕದ ವಿಚಾರದಲ್ಲಿ ಸಿಪಿಐ (ಎಂ) ನೇತೃತ್ವದ ಕೇರಳ ಸರ್ಕಾರ ತೀವ್ರ ಹಸ್ತಕ್ಷೇಪ ಮಾಡುತ್ತಿದೆ. ಈ ಮೂಲಕ ಕುಲಪತಿಯಾದ ನನ್ನ ಅಧಿಕಾರವನ್ನು ದುರ್ಬಲಗೊಳಿಸುತ್ತಿದೆ ಎಂದು ರಾಜ್ಯಪಾಲ ಆರಿಫ್​ ಮುಹಮ್ಮದ್​ ಖಾನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!