ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬೆದರಿಕೆಯನ್ನು ನಿರಂತರ ಹಾಕುತ್ತಿದ್ದಾರೆ. ಆದರೆ ಮಣಿಪುರ ಮತ್ತು ಹರಿಯಾಣದಲ್ಲಿ ಅವರ ಸಹವರ್ತಿಗಳು ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮೌನ ಕಾಳಜಿ ಬಹಿಸದೇ ಇರೋದು ಕಾಣುತ್ತಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ ಮತ್ತು ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಶುಕ್ರವಾರ ಭಗವಂತ್ ಮಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
ಪುರೋಹಿತ್ ತಮ್ಮ ಅಧಿಕಾರದ ವ್ಯಾಪ್ತಿಯ ಹೊರತಾಗಿ ಬರೆದ ಏಳು ಪತ್ರಗಳಿಗೆ ನಾನು ಪ್ರತಿಕ್ರಿಯಿಸಲಿಲ್ಲ,