ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ಮುಂದುವರಿಸಿದ್ದಾರೆ.
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಏಕೆ ಅನುಮತಿ ಕೊಟ್ಟಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿ ಅವರು ತಪ್ಪು ಮಾಡಿದ್ದಾರೆ ಅಂತಾ ಪ್ರಾಸಿಕ್ಯೂಷನ್ ಅನುಮತಿ ಕೇಳಿದ್ದಾರೆ. ರಾಜ್ಯಪಾಲರು ಯಾಕೆ ಈ ಬಗ್ಗೆ ಕೊಟ್ಟಿಲ್ಲ ಗೊತ್ತಿಲ್ಲ ಎಂದು ಪ್ರಶ್ನಿಸಿದರು. ಇದೇ ವಿಚಾರವಾಗಿ ರಾಜ್ಯಪಾಲರಿಗೆ ಎಸ್ ಐಟಿ ಅವರು ಮತ್ತೊಮ್ಮೆ ಪತ್ರ ಬರೆದಿದ್ದಾರೆ. ರಾಜ್ಯಪಾಲರು ಕಾನೂನು ರೀತಿಯಲ್ಲಿ ನಡೆದುಕೊಳ್ಳಬೇಕು. ವರ್ಷಗಟ್ಟಲೆ, ತಿಂಗಳಗಟ್ಟಲೆ ಯಾಕೆ ಇಟ್ಟುಕೊಳ್ಳಬೇಕು? ಕೇಂದ್ರ ಬಿಜೆಪಿ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಆರೋಪ ಸರಿ ಇಲ್ಲಾ ಎಂದು ತಿರಸ್ಕಾರ ಮಾಡಲಿ ಎಂದರು.