ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಅಧಿಕವಾಗಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗ್ರಹಿಸಿದರು.ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚಿನ ಗಮನ ಹರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.
ವಸಂತ ನಗರದ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ಜರಗಿದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ’ನಮ್ಮ ದೇಶಲ್ಲಿ ವೈದ್ಯಕೀಯ ಸೀಟು ಸಿಗದ ಕಾರಣ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ವಿದೇಶಗಳಿಗೆ ತೆರಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರಕಾರ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಿದೆ ಎಂದರು.