ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ರಾಜ್ಯಪಾಲರ ಬಹಿರಂಗ ಸವಾಲು

Prasthutha|

ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸವಾಲೆಸೆದಿರುವ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್, ಉಪಕುಲಪತಿಗಳ ನೇಮಕದಲ್ಲಿ ತನ್ನ ರಾಜಕೀಯ ಹಸ್ತಕ್ಷೇಪದ ಉದಾಹರಣೆಯನ್ನು ಸಿಎಂ ತೋರಿಸಿದರೆ ನಾನು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

- Advertisement -

ದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಈ ನಿರ್ದಿಷ್ಟ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪದ ಮುಖ್ಯಮಂತ್ರಿಯ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ ವಿಜಯನ್ ಒಂದು ಉದಾಹರಣೆಯನ್ನು ಪ್ರಸ್ತುತಪಡಿಸುವಲ್ಲಿ ಯಶಸ್ವಿಯಾದರೆ ರಾಜೀನಾಮೆ ನೀಡುವುದಾಗಿ ಹೇಳಿದರು.

ಆರ್ ಎಸ್ಎಸ್ ಹಿನ್ನಲೆಯುಳ್ಳ ವ್ಯಕ್ತಿಗಳನ್ನು ಕರೆತರಲು ನಾನು ಇದನ್ನು (ವಿಸಿಗಳ ವಿರುದ್ಧ ಕ್ರಮ) ಮಾಡುತ್ತಿದ್ದೇನೆ ಎಂದು ಅವರು ಹೇಳುತ್ತಿದ್ದಾರೆ. ನನ್ನ ಅಧಿಕಾರವನ್ನು ಬಳಸಿಕೊಂಡು ಇದುವರೆಗೆ ನಾನು ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡಿದ್ದರೆ, ಕೇವಲ ಆರ್ ಎಸ್ ಎಸ್ ನವರಲ್ಲ, ಯಾವುದೇ ವ್ಯಕ್ತಿಯನ್ನು ನಾಮನಿರ್ದೇಶನ ಮಾಡಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ. ಅದನ್ನು ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ಸಿಎಂ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಎಂದು ಖಾನ್ ಕೇಳಿದರು.



Join Whatsapp