Home ಟಾಪ್ ಸುದ್ದಿಗಳು ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್

ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್

ಬೆಂಗಳೂರು: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್​​-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್(ರಾಜ್ಯಪಾಲ) ಆಳ್ವಿಕೆ ಜಾರಿಯಾಗಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಾವು 3 ಕ್ಷೇತ್ರ ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು. ರಾಜ್ಯದಲ್ಲಿ ಮುಂದೆ ಏನು ಆಗುತ್ತದೆ ಅನ್ನೋದು ದೇವರ ಇಚ್ಛೆ ಎಂದು ಹೇಳಿದರು.

ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿಗಾಗಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದೆ ಮೋದಿ ದೇವೇಗೌಡರ ನಾಯಕತ್ವಕ್ಕೆ ಬೆಂಬಲ ಸಿಗಲಿದೆ ಅನ್ನೋ ವಿಶ್ವಾಸ ಇದೆ. ಯಡಿಯೂರಪ್ಪ ಹಬ್ಬ ಮುಗಿದ ಮೇಲೆ ಪ್ರಚಾರಕ್ಕೆ ಬರಲಿದ್ದಾರೆ. ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಸಿದರು.

Join Whatsapp
Exit mobile version