Home ಟಾಪ್ ಸುದ್ದಿಗಳು ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ರಾಜ್ಯಪಾಲರ ಭೇಟಿ, ಗೌರವ ಸಲ್ಲಿಕೆ

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ರಾಜ್ಯಪಾಲರ ಭೇಟಿ, ಗೌರವ ಸಲ್ಲಿಕೆ

ಮಡಿಕೇರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಶುಕ್ರವಾರ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

ಬಳಿಕ ಅಲ್ಲಿನ ಯುದ್ಧ ಟ್ಯಾಂಕ್, ಯುದ್ಧ ವಿಮಾನ, ಯುದ್ಧ ಹಡಗು ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಜನರಲ್ ತಿಮ್ಮಯ್ಯ ಅವರ ಬಾಲ್ಯದ ಜೀವನ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಮಾತನಾಡಿ, ದೇಶದ ಬಗ್ಗೆ ಜನರಲ್ ತಿಮ್ಮಯ್ಯ ಅವರಿಗೆ ಇರುವ ಸಮರ್ಪಣಾ ಭಾವ ಹಾಗೂ ದೇಶ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಕೊಂಡಾಡಿದರು.

ಜನರಲ್ ತಿಮ್ಮಯ್ಯ ಅವರ ಬದುಕು, ಜೀವನವು ಯುವ ಜನತೆಗೆ ಪ್ರೇರಣಾದಾಯಕವಾಗಿದೆ. ದೇಶದ ಯುವ ಜನತೆ ಕೊಡಗಿಗೆ ಪ್ರವಾಸಕ್ಕೆ ಬಂದಾಗ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡುವಂತಾಗಬೇಕು ಎಂದು ರಾಜ್ಯಪಾಲರು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನಾ, ನಾನಾ ಇಲಾಖೆ ಅಧಿಕಾರಿಗಳು ಇದ್ದರು.

Join Whatsapp
Exit mobile version