Home ಟಾಪ್ ಸುದ್ದಿಗಳು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಗೋವಿಂದ ಕಾರಜೋಳ: ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಗೋವಿಂದ ಕಾರಜೋಳ: ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ನವದೆಹಲಿ: ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್’ರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.
ಕೇಂದ್ರದ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ನಿವಾಸದಲ್ಲಿ ಇಂದು ಮುಂಜಾನೆ ಈ ಮಹತ್ವದ ಸಭೆ ನಡೆಯಿತು.
ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಕುರಿತು ಮಹತ್ವದ ಚರ್ಚೆ ನಡೆಯಿತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಲಾಯಿತು.
ಭದ್ರ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳರವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹದಾಯಿ ಯೋಜನೆಯ ಅನುಮೋದನೆ ಆದಷ್ಟು ಬೇಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

Join Whatsapp
Exit mobile version