ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್ ಅಹ್ಮದ್ ನೇಮಕ

Prasthutha|

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಮತ್ತು ನಜೀರ್ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

- Advertisement -


ಸಂಪುಟ ದರ್ಜೆ ಸ್ಥಾನಮಾನಗಳನ್ನು ನೀಡುವ ಮೂಲಕ ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ. ಚುನಾವಣಾ ನೀತಿ ತಂತ್ರಜ್ಞ ಸುನೀಲ್ ಕನುಗೋಳು ಅವರು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

Join Whatsapp
Exit mobile version