ಸರ್ಕಾರಿ ಜಾಹೀರಾತಿನಲ್ಲಿ ಪ್ರಥಮ ಪ್ರಧಾನಿ ನೆಹರೂಗೆ ಕೊಕ್, ಕ್ಷಮಾಪಣೆ ಕೇಳಿದ ಸಾವರ್ಕರ್’ಗೆ ‘ಕ್ರಾಂತಿಕಾರಿ’ ಬಿರುದು: ಸಾರ್ವಜನಿಕ ಆಕ್ರೋಶ

Prasthutha|


ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರವು ಕನ್ನಡ ದಿನ ಪತ್ರಿಕೆಗಳಿಗೆ ನೀಡಿರುವ ಜಾಹೀರಾತುಗಳಲ್ಲಿ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಅವರನ್ನು ಕಡೆಗಣಿಸಿದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ರಾಷ್ಟ್ರನಾಯಕರಾದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರಬೋಸ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಚಂದ್ರಶೇಖರ್‌ ಆಜಾದ್‌, ಲಾಲಾ ಲಜ್‌ ಪತ್‌ ರಾಯ್‌, ಬಾಲ ಗಂಗಾಧರ್‌ ತಿಲಕ್‌, ಬಿಪಿನ್‌ ಚಂದ್ರ ಪಾಲ್‌, ಡಾ.ಬಿ.ಆರ್‌.ಅಂಬೇಡ್ಕರ್‌, ಲಾಲ್‌ ಬಹುದ್ದೂರ್‌ ಶಾಸ್ತ್ರಿ, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ಫೋಟೋಗಳ ಜೊತೆಗೆ ಸಾವರ್ಕರ್‌ ಫೋಟೋವನ್ನು ಮುದ್ರಿಸಲಾಗಿದೆ.

ರಾಷ್ಟ್ರ ನಾಯಕರ ಫೋಟೋದ ಸಾಲಿನಲ್ಲಿ ಬ್ರಿಟಿಷರೊಂದಿಗೆ ಕ್ಷಮಾಪಣೆ ಕೇಳಿದ ಸಾವರ್ಕರ್ ಫೋಟೋವನ್ನು ಮುದ್ರಿಸಲಾಗಿದ್ದು, ‘ಕ್ರಾಂತಿಕಾರಿ’ ಎಂಬ ಬಿರುದನ್ನು ಸಾವರ್ಕರ್ ಗೆ ನೀಡಲಾಗಿದೆ.

- Advertisement -

ಈ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಾಧ್ಯಮಗಳಿಗೆ ನೀಡಿದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಫೋಟೋ ಇಲ್ಲ. ಅಂದಿನ ಹೋರಾಟದಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಸೆರೆಮನೆ ವಾಸ ಅನುಭವಿಸಿದ ನೆಹರೂ ಅವರನ್ನು ಕಡೆಗಣಿಸುವಷ್ಟು ಸಣ್ಣ ತನ ಒಳ್ಳೆಯದಲ್ಲ. ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಗೆ ಬಂದವರ ಫೋಟೋ ಹಾಕುವ ಸಿ.ಎಂ.ಬಸವರಾಜ ಬೊಮ್ಮಾಯಿಯವರೇ ನಿಮ್ಮ ಅಧಿಕಾರಾವಧಿಯಲ್ಲಿ ಇಂಥ ಅಪಚಾರ ನಡೆಯಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ನಡೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲೂ ಕಿಡಿ ಕಾರಲಾಗಿದೆ.

Join Whatsapp