Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರದಿಂದ ಮಹಾ ಎಡವಟ್ಟು: ನಿಧನರಾದವರನ್ನೇ ಸದಸ್ಯರನ್ನಾಗಿ ನೇಮಿಸಿದ ಸರ್ಕಾರ !

ರಾಜ್ಯ ಸರ್ಕಾರದಿಂದ ಮಹಾ ಎಡವಟ್ಟು: ನಿಧನರಾದವರನ್ನೇ ಸದಸ್ಯರನ್ನಾಗಿ ನೇಮಿಸಿದ ಸರ್ಕಾರ !

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ನಿಧನರಾದವರನ್ನೇ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದೆ.


ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಆಯ್ಕೆ ಮಾಡಲಾಗಿದೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ನಿಧನರಾಗಿದ್ದರು.

Join Whatsapp
Exit mobile version