ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್’ರನ್ನು ಆಡಳಿತಾಧಿಕಾರಿಯಾಗಿ ನೇಮಿಸಿದ ಸರ್ಕಾರ

Prasthutha|

ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ಬಂಧಿತರಾಗಿ ಜೈಲಿನಲ್ಲಿರುವ ಮುರುಘಾ ಶ್ರೀ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊನೆಗೂ ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದೆ.

- Advertisement -


ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಚಿತ್ರದುರ್ಗ ಮುರುಘಾಮಠದ ಆಡಳಿತಾಧಿಕಾರಿಯಾಗಿ ನೇಮಿಸಿ ಇಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ.


ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ಹಿನ್ನೆಲೆ ಶಿವಮೂರ್ತಿ ಮುರುಘಾ ಶರಣರು ಕಳೆದ 3 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರಿಂದ ಹಲವು ದಿನಗಳೀಂದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಆಗ್ರಹಗಳು ಬರುತ್ತಿವೆ. ಅಂತಿಮವಾಗಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಯಿಂದ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ.

- Advertisement -


ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ಆಡಳಿತಾಧಿಕಾರಿ ನೇಮಕ ಮಾಡಲಾಗುವುದು ಎಂದು ಹಿಂದೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳ ಮುಂದೆ ಹೇಳಿದ್ದರು.


ಮೊನ್ನೆ ಅಷ್ಟೇ ಚಿತ್ರದುರ್ಗದ ಮುರುಘಾಮಠದ ಅಧೀನದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯಕ್ಕೆ ಸರ್ಕಾರದ ಬೋರ್ಡ್ ಆಫ್ ಗವರ್ನರ್ಸ್ ಆಗಿ ಬಿಜೆಪಿ ವಿಧಾನಪರಿಷತ್ ಕೆ.ಎಸ್.ನವೀನ್ ಅವರನ್ನು ನಾಮ ನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.



Join Whatsapp