Home ಟಾಪ್ ಸುದ್ದಿಗಳು ಮತಾಂತರ ನಿಷೇಧ ಕಾನೂನು ತರಲು ಸರ್ಕಾರ ಪ್ರಯತ್ನ: ಸಿಎಂ ಬೊಮ್ಮಾಯಿ

ಮತಾಂತರ ನಿಷೇಧ ಕಾನೂನು ತರಲು ಸರ್ಕಾರ ಪ್ರಯತ್ನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮತಾಂತರ ನಿಷೇಧ ಕಾನೂನು ತರಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ  ಅವರು, ಮತಾಂತರ ನಿಷೇಧ ಕಾಯ್ದೆ ಕರಡಿಗೆ ಒಪ್ಪಿಗೆ ನೀಡಿ ಅದನ್ನು ನಾವು ಅಧಿವೇಶನದಲ್ಲಿ ತರುತ್ತೇವೆ ಎಂದಿದ್ದಾರೆ. ಮತಾಂತರ ನಿಷೇಧ ಸಮಾಜಕ್ಕೆ ಒಳ್ಳೆಯದಲ್ಲ, ಮಾರಕ, ಕ್ರೈಸ್ತ, ಮುಸ್ಲಿಂ, ಬೌದ್ಧ, ಸಿಖ್ ಧರ್ಮದವರಿಗೆ ಈ ಬಗ್ಗೆ ಆತಂಕ ಬೇಡ ಎಂದು ಹೇಳಿದ್ದಾರೆ.

ಮತಾಂತರ ಸಮಾಜಕ್ಕೆ ಎಷ್ಟು ಮಾರಕ ಎಂಬ ಬಗ್ಗೆ ವ್ಯಾಖ್ಯಾನ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕ್ರೈಸ್ತ, ಮುಸಲ್ಮಾನ, ಸಿಖ್, ಬೌದ್ಧ, ಹಿಂದೂ ಹೀಗೆ ಈ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ಗುರುತು ಪಡೆದಿರುವ ಧರ್ಮಗಳು. ಅವುಗಳಿಗೆ, ಆ ಜನಾಂಗದವರಿಗೆ ಯಾವುದೇ ಆತಂಕ ಬೇಡ, ಅವರ ಪ್ರಾರ್ಥನೆ, ಅವರ ಧರ್ಮ, ನಂಬಿಕೆಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ, ಆದರೆ ಬಡತನ, ಜನರ ಕಷ್ಟದ ಪರಿಸ್ಥಿತಿಯನ್ನು ದುರುಪಯೋಗ ಮಾಡಿಕೊಂಡು ಆಸೆ, ಆಮಿಷಗಳನ್ನೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ. ಆದ್ದರಿಂದ ಈ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಈ ಚರ್ಚೆಯ ಸ್ವರೂಪದಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನು ಜಾರಿಗೆ ಬಂದಿದೆ ಎಂದರು.

Join Whatsapp
Exit mobile version