Home ಟಾಪ್ ಸುದ್ದಿಗಳು ನಟ ಚೇತನ್ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನಟ ಚೇತನ್ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.


ಈ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿರುವ ಚೇತನ್, ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಚೇತನ್, ನಾನು ಹುಟ್ಟಿ, ಓದಿದ್ದು ಅಮೆರಿಕದಲ್ಲಿ ಆದರೂ ಕಾರ್ಯನಿರ್ವಹಿಸಲು ಭಾರತಕ್ಕೆ ಬಂದೆ. ಸಿನಿಮಾ ಸೇರಿದಂತೆ ಸಾಕಷ್ಟು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೋರಾಟ ಮಾಡಿ ಆದಿವಾಸಿಗಳಿಗೆ 528 ಮನೆಗಳನ್ನು ಕಟ್ಟಿಸಿದ್ದೇನೆ. ನನ್ನ ಸಿದ್ಧಾಂತ, ಅಂಬೇಡ್ಕರ್ ವಾದ, ಪೆರಿಯರ್ ವಾದ ಸರ್ಕಾರಕ್ಕೆ ಇಷ್ಟವಾಗಿಲ್ಲ ಎಂದು ಈ ರೀತಿ ಕ್ರಮ ಕೈಗೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.


”ನನಗೆ ಓಸಿಐ (ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನೀಡಿದ್ದಾರೆ. ಇದರಲ್ಲಿ ಮತ ಹಾಕೋದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ತದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಅಂತ 10 ತಿಂಗಳ ಹಿಂದೆ ಶೋಕಾಸ್ ನೋಟೀಸ್ ನೀಡಿದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದ್ದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಅಂತ ವೀಸಾ ರದ್ದು ನೋಟೀಸ್ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.


ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ ಎಂದರು.

Join Whatsapp
Exit mobile version