Home ಟಾಪ್ ಸುದ್ದಿಗಳು ಜಮ್ಮು | ಮಸೀದಿಗಳಲ್ಲಿನ ಧ್ವನಿವರ್ಧಕ ವಿರೋಧಿಸಿ ಹನುಮಾನ್ ಚಾಲೀಸಾ ಪಠಿಸಿದ ABVP

ಜಮ್ಮು | ಮಸೀದಿಗಳಲ್ಲಿನ ಧ್ವನಿವರ್ಧಕ ವಿರೋಧಿಸಿ ಹನುಮಾನ್ ಚಾಲೀಸಾ ಪಠಿಸಿದ ABVP

ಜಮ್ಮು: ಸ್ಥಳೀಯ ಮಸೀದಿಗಳಲ್ಲಿ ಧ್ವನಿವರ್ಧಕದ ಮೂಲಕ ಆಝಾನ್ ಕೂಗುವುದನ್ನು ವಿರೋಧಿಸಿ ಗಾಂಧಿ ಮೆಮೋರಿಯಲ್ ಕಾಲೇಜಿನ ABVP ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರು ಮಾತಿನ ಚಕಮಕಿ ನಡೆದಿದ್ದು, ABVP ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆಗೊಳಿಸಿದ್ದಾರೆ.

ಧ್ವನಿವರ್ಧಕ ಮೂಲಕ ಕೂಗುವ ಮಸೀದಿಯ ಆಝಾನ್ ನಮ್ಮ ಕಲಿಕೆಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಕೆಲ ABVP ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಮ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸುವುದನ್ನು ತಡೆಯಲು ಸ್ಥಳೀಯಾಡಳಿತದ ವಿಫಲವಾಗಿರುವುದನ್ನು ಖಂಡಿಸಿ ABVP ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿವೆ.

ಈ ಮಧ್ಯೆ ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ರಹಿತವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸುವ ನಿರ್ಣಯವನ್ನು ಜಮ್ಮು ಪಾಲಿಕೆ ಅಂಗೀಕರಿಸಿತ್ತು.

Join Whatsapp
Exit mobile version