Home ಟಾಪ್ ಸುದ್ದಿಗಳು ಸಾಹಿತಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧ: ಪರಮೇಶ್ವರ್

ಸಾಹಿತಿಗಳಿಗೆ ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧ: ಪರಮೇಶ್ವರ್

ಬೆಂಗಳೂರು: ಸಾಹಿತಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ರೀತಿಯ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೆ ರಕ್ಷಣೆ ಕೊಟ್ಟಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡ ಮಾಡುತ್ತೇವೆ. ಹಿರಿಯ ಅಧಿಕಾರಿಗಳೇ ಈ ಬಗ್ಗೆ ತನಿಖೆ ನಡೆಸುತ್ತಾರೆ. ಸಾಹಿತಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನು ಒಂದು ವರ್ಗದ ಜನ ವಿರೋಧಿಸುವ ಕೆಲಸ ಮಾಡ್ತಿದ್ದಾರೆ. ಸೈದ್ಧಾಂತಿಕ ವ್ಯತ್ಯಾಸಗಳಿಂದಾಗಿಯೇ ಗೌರಿ ಲಂಕೇಶ್ ಹಾಗೂ ಎಂ.ಎಂ.ಕಲ್ಬುರ್ಗಿ ಅವರ ಹತ್ಯೆಗಳಾಗಿದೆ ಎಂದರು.


ರಾಜ್ಯದ ಹೆಸರಾಂತ ಸಾಹಿತಿಗಳಲ್ಲಿ ಕೆಲವರು ಹಿರಿಯ ಸಾಹಿತಿಗಳು, ಮರುಳ ಸಿದ್ದಪ್ಪ ನೇತೃತ್ವದಲ್ಲಿ ನನ್ನನ್ನು ಭೇಟಿ ಮಾಡಿದ್ದಾರೆ. ಹದಿನೈದು ದಿನಗಳ ಹಿಂದೆ ಪತ್ರ ಬರೆದು ಬೆದರಿಕೆ ಪತ್ರ, ಕರೆಗಳು ಬರುತ್ತಿವೆ ಎಂಬುದನ್ನು ನನ್ನ ಗಮನಕ್ಕೆ ತಂದಿದ್ದರು. ನಮ್ಮನ್ನು ಯಾವ ರೀತಿ ರಕ್ಷಣೆ ಮಾಡ್ತೀರಿ ಎಂದು ಪ್ರಶ್ನಿಸಿದ್ದರು. ಆ ಪತ್ರವನ್ನು ಡಿಜಿಪಿಗೆ ಕಳುಹಿಸಿದ್ದೇನೆ. ಯಾರಿಗೆ ಪರ್ಸನಲ್ ಸೆಕ್ಯೂರಿಟಿ ಬೇಕೋ ಕೊಡ್ತೇವೆ. ಗನ್ ಮ್ಯಾನ್ಗಳನ್ನು ಕೂಡ ಕೊಡ್ತೇವೆ ಅಂತಾ ಹೇಳಿದ್ದೇನೆ ಎಂದು ಹೇಳಿದರು.

Join Whatsapp
Exit mobile version