Home ಟಾಪ್ ಸುದ್ದಿಗಳು ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಶುಲ್ಕ ಕಡಿಮೆ ಮಾಡಲು ಸರ್ಕಾರ ನಿರ್ಧಾರ: ಸಿ ಎಂ ಬೊಮ್ಮಾಯಿ

ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಶುಲ್ಕ ಕಡಿಮೆ ಮಾಡಲು ಸರ್ಕಾರ ನಿರ್ಧಾರ: ಸಿ ಎಂ ಬೊಮ್ಮಾಯಿ

ಬೆಂಗಳೂರು: ವೈದ್ಯಕೀಯ ಶಿಕ್ಷಣಕ್ಕೆ ಖರ್ಚು-ವೆಚ್ಚಗಳು ಹೆಚ್ಚಾಗುತ್ತಿರುವುದರಿಂದ ವಿದ್ಯಾರ್ಥಿಗಳು ವಿದೇಶಗಳಿಗೆ ಹೋಗುತ್ತಿದ್ದಾರೆ. ರಾಜ್ಯದಲ್ಲಿ  ವೈದ್ಯಕೀಯ ಶಿಕ್ಷಣದ ಶುಲ್ಕ ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿಯವರೇ ಘೋಷಣೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು , ವೈದ್ಯಕೀಯ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡುತ್ತೇವೆ. ಸರ್ಕಾರದ ಸೀಟಿಗೆ ಕಡಿಮೆ ಶುಲ್ಕವಿದ್ದರೂ ಕೂಡ ಖಾಸಗಿ ವಲಯದಲ್ಲಿ ಬಹಳ ಹೆಚ್ಚಾಗುತ್ತಿದೆ. ದ್ವಿತೀಯ ಪಿಯುಸಿಯಲ್ಲಿ ಶೇಕಡಾ 90-95ರಷ್ಟು ಅಂಕಗಳನ್ನು ಗಳಿಸಿದವರು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗದೆ ಮ್ಯಾನೇಜ್ ಮೆಂಟ್ ಸೀಟು, ಎನ್ಆರ್ ಐ ಸೀಟುಗಳಿಗೆ ಹೋಗುತ್ತಿದ್ದಾರೆ. ಈ ಬಗ್ಗೆ ನಾನು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ನಮ್ಮ ರಾಜ್ಯದಲ್ಲಿ ಶುಲ್ಕ ಕಡಿಮೆ ಮಾಡಲು ಎಬಿಸಿ ಕ್ಯಾಟಗರಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದ್ದು, ಅಲ್ಲಿನ ವೈದ್ಯಕೀಯ ಶಿಕ್ಷಣಕ್ಕೂ, ಇಲ್ಲಿನ ಶಿಕ್ಷಣಕ್ಕೂ ಬದಲಾವಣೆ ಇದೆ‌. ಈಗಾಗಲೇ ಇಂತಹ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಭಾರತೀಯ ವೈದ್ಯಕೀಯ ಮಂಡಳಿ ಚಿಂತನೆ ಮಾಡುತ್ತಿದೆ ಎಂದು ಸಿ ಎಂಹೇಳಿದರು.

Join Whatsapp
Exit mobile version