Home ಟಾಪ್ ಸುದ್ದಿಗಳು ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ‘ಟಾಸ್ಕ್ ಫೋರ್ಸ್’ ಪುನರ್ ರಚನೆ

ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ‘ಟಾಸ್ಕ್ ಫೋರ್ಸ್’ ಪುನರ್ ರಚನೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕಳೆದುಕೊಂಡು ಅಪಾರ ಸಾವು ನೋವುಗಳು ಸಂಭವಿಸುತ್ತಿದ್ದು, ಲಾಕ್ ಡೌನ್ ಜಾರಿ ಮಾಡಿಯೂ ಕೊರೋನಾ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೀಗ ರಾಜ್ಯ ಸರಕಾರವು ಕೊರೋನಾ ವೈರಸ್‌ ಅನ್ನು ನಿಯಂತ್ರಿಸುವ ಕುರಿತು ತೆಗೆದುಕೊಳ್ಳುವ ಕ್ರಮದ ಬಗ್ಗೆ ಪರಾಮರ್ಶಿಸಲು ರಾಜ್ಯ ಕಾರ್ಯಪಡೆ(ಟಾಸ್ಕ್ ಫೋರ್ಸ್) ಯನ್ನು ಪುನರ್‌ ರಚನೆ ಮಾಡಿದೆ.

ರಾಜ್ಯದಲ್ಲಿ ಕೊರೋನಾ ವೈರಸ್‌ ನಿಯಂತ್ರಿಸುವ ಕುರಿತು ತೆಗೆದುಕೊಳ್ಳುವ ಕ್ರಮಗಳ ಕುರಿತು ಪರಾಮರ್ಶಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಟಾಸ್ಕ್‌ ಫೋರ್ಸ್‌ ತಂಡದ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ತಂಡದ ಸದಸ್ಯರಾಗಿ ಸಚಿವರುಗಳಾದ ಸುರೇಶ್‌ ಕುಮಾರ್, ಸಿ.ಸಿ ಪಾಟೀಲ್‌ ಹಾಗೂ ಅರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರನ್ನೊಳಗೊಂಡ ಟಾಸ್ಕ್‌ ಫೋರ್ಸ್‌ ಅನ್ನು ಪುರನ್‌ ರಚನೆ ಮಾಡಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಬಿ.ಎಸ್‌. ನಾಗರಾಜ್‌ ಅವರು ಆದೇಶ ಹೊರಡಿಸಿದ್ದಾರೆ.


Join Whatsapp
Exit mobile version