Home ಟಾಪ್ ಸುದ್ದಿಗಳು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸರ್ಕಾರದ ಪಾತ್ರವಿಲ್ಲ: ಪರಮೇಶ್ವರ್

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸರ್ಕಾರದ ಪಾತ್ರವಿಲ್ಲ: ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿರ್ಧಾರವನ್ನು ಅಲ್ಲಿನ ಪಾಲಿಕೆ ಕೈಗೊಳ್ಳಲಿದ್ದು, ಇದರಲ್ಲಿ ಸರ್ಕಾರದ ಪಾತ್ರವಿರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.


ಪೊಲೀಸ್ ಕಮಿಷನರೇಟ್ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ ಮೈದಾನ ಜಾಗ ಪಾಲಿಕೆಗೆ ಸಂಬಂಧಿಸಿದ್ದು. ಅಲ್ಲಿ ಈ ಬಾರಿಯೂ ಗಣೇಶೋತ್ಸವ ಆಚರಣೆ ಮಾಡಬೇಕೋ, ಇಲ್ಲವೋ ಎಂಬುದನ್ನು ಪಾಲಿಕೆಯೇ ನಿರ್ಧಾರ ಮಾಡಲಿದೆ. ಅವರು ಸನ್ನಿವೇಶ, ಪರ, ವಿರೋಧ ಪರಿಶೀಲನೆ ಮಾಡಿ ನಿರ್ಧಾರ ಮಾಡಬೇಕು. ಪರಿಸ್ಥಿತಿ ಅವಲೋಕಿಸಿ ಪೊಲೀಸರು ಸರ್ಕಾರಕ್ಕೆ ಪತ್ರ ಬರೆಯುವವರೆಗೆ ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿರುವುದಿಲ್ಲ ಎಂದು ಹೇಳಿದರು.

Join Whatsapp
Exit mobile version