ಪ್ರತಾಪಗಢ: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರವು ದಲಿತರು, ಹಿಂದುಳಿದ ವರ್ಗದವರು ಮತ್ತು ರಾಷ್ಟ್ರಪತಿಯವರಿಗೆ ಆಹ್ವಾನ ನೀಡದೆ ಅವಮಾನಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ರಾಂಪುರ ಖಾಸ್ ವಿಧಾನಸಭೆ ಕ್ಷೇತ್ರದ ಲಾಲ್ಗಂಜ್ ಇಂದಿರಾ ವೃತ್ತದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ರಾಹುಲ್, ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕೈಗಾರಿಕೋದ್ಯಮಿಗಳು ಮತ್ತು ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಶೇ 73 ರಷ್ಟಿರುವ ಜನರಿಗೆ ಯಾವುದೇ ಪ್ರಾತಿನಿಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ ಎಂದು ದೂರಿದ್ದಾರೆ.