Home ಟಾಪ್ ಸುದ್ದಿಗಳು ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ ‘RT-PCR ಪರೀಕ್ಷೆ’ ಕಡ್ಡಾಯಗೊಳಿಸಿದ ಸರ್ಕಾರ

ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ ‘RT-PCR ಪರೀಕ್ಷೆ’ ಕಡ್ಡಾಯಗೊಳಿಸಿದ ಸರ್ಕಾರ

ನವದೆಹಲಿ: ಜಗತ್ತಿನಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚೀನಾ ಸೇರಿದಂತೆ 4 ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ‘RT-PCR ಪರೀಕ್ಷೆ’ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್’ನಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ -19 ಪತ್ತೆಗಾಗಿ ಆರ್’ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶನಿವಾರ ಹೇಳಿದ್ದಾರೆ.

ಇನ್ನು ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ಸ್ಥಿತಿಯನ್ನು ಘೋಷಿಸಲು ‘ಏರ್ ಸುವಿಧಾ’ ಫಾರ್ಮ್ ಅನ್ನು ಭರ್ತಿ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು. ಯಾವುದೇ ಪ್ರಯಾಣಿಕರಲ್ಲಿ ಕೋವಿಡ್ ರೋಗಲಕ್ಷಣಗಳು ಅಥವಾ ಕೋವಿಡ್ ಪಾಸಿಟಿವ್ ಎಂದೂ ಕಂಡುಬಂದರೆ  ಅವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಅವರು ಹೇಳಿದರು.

Join Whatsapp
Exit mobile version