ರಾಜ್ಯದಲ್ಲಿ 1ನೇ ತರಗತಿಗೆ ಸೇರಲು ಮಕ್ಕಳಿಗೆ ಹೊಸದಾಗಿ ವಯೋಮಿತಿ ನಿಗದಿ: ಸರಕಾರದಿಂದ ಆದೇಶ

Prasthutha|

- Advertisement -

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಅವರಿಗೆ 6 ವರ್ಷ ತುಂಬಲೇಬೇಕು ಎಂದು ರಾಜ್ಯ ಸರ್ಕಾರ ಹೊಸ ಹಾಗೂ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರಕಾರ ನೂತನ ವಯೋಮಿತಿ ನಿಗದಿಪಡಿಸಿ, 1ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷ ತುಂಬಬೇಕು ಎಂದು ಸರಕಾರ ತಿಳಿಸಿದೆ.

- Advertisement -

ಈ ಹಿಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು 5 ವರ್ಷ, 5 ತಿಂಗಳು ಹಾಗೂ 5 ವರ್ಷ 10 ತಿಂಗಳು ಆಗಿರಬೇಕು ಎಂಬ ನಿಯಮವಿತ್ತು. ಇದೀಗ ಆರ್‌ಟಿಇ ಶಿಕ್ಷಣ ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮ 2012 ಅನ್ವಯ ಸರ್ಕಾರ ಹೊಸ ವಯೋಮಿತಿಯನ್ನು ನಿಗದಿ ಮಾಡಿದೆ.



Join Whatsapp