ಹಾಸನ: ಮಂಗಳೂರು ಮತ್ತು ಬೆಂಗಳೂರು ಸಂಪರ್ಕಕ್ಕೆ ಪ್ರಮುಖ ಮಾರ್ಗವಾಗಿರುವ ಶಿರಾಡಿ ಘಾಟ್ ನಲ್ಲಿ ಸುರಂಗವನ್ನು ಒಳಗೊಂಡ ಮಾರ್ಗ ನಿರ್ಮಾಣ ಆದಷ್ಟು ಬೇಗ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕಾಮಗಾರಿ ವೀಕ್ಷಣೆ ವೇಳೆ ಮಾಧ್ಯಮದಬರೊಂದಿಗೆ ಮಾತನಾಡಿದ ಅವರು,”ಒಟ್ಟು 30 ಕಿಲೋಮೀಟರ್ ಉದ್ದದ ಹೊಸ ಯೋಜನೆಗೆ ರೂಪುರೇಷೆ ಸಿದ್ದಪಡಿಸಲಾಗಿದೆ. ಇದರಲ್ಲಿ 3.8 ಕಿಲೋಮೀಟರ್ ಸುರಂಗ ಮಾರ್ಗ ಇರಲಿದೆ. ಹತ್ತು ಕಿಲೋಮೀಟರ್ ಪ್ರದೇಶ ಅರಣ್ಯ ಸಂರಕ್ಷಣಾ ಕಾಯ್ದೆ ವ್ಯಾಪ್ತಿಯಲ್ಲಿ ಇರುವುದರಿಂದ ಅರಣ್ಯ ಇಲಾಖೆಯೊಂದಿಗೆ ವ್ಯವಹರಿಸಿ ಆನೆ ಕಾರಿಡಾರ್ ಸೇರಿದಂತೆ ಪ್ರಾಣಿಗಳ ಚಲನ ವಲನಕ್ಕೆ ಯಾವುದೇ ಧಕ್ಕೆ ಉಂಟಾಗದಂತೆ ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗುವುದು” ಎಂದರು.