Home ಟಾಪ್ ಸುದ್ದಿಗಳು ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ

ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಚಿಂತನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೇ ವೇಳೆ, ಎಸ್ ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಕೆಲ ಸಮಯದ ಹಿಂದೆ ಸ್ಥಗಿತಗೊಂಡಿದ್ದು, ಅದನ್ನು ಪುನರಾರಂಭಿಸುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಉಪ ಯೋಜನೆಯಡಿ (SCSP) ಎಸ್ ಸಿ ವಿದ್ಯಾರ್ಥಿಗಳಿಗೆ ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ಎಸ್ ಟಿ ಸಮುದಾಯದವರಿಗೆ ಲ್ಯಾಪ್ಟಾಪ್ ವಿತರಿಸಲು ತಿಳಿಸಿದರು.


ಇದಕ್ಕಾಗಿ 230 ಕೋಟಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸೂಚಿಸಿದರು.

Join Whatsapp
Exit mobile version