Home ಟಾಪ್ ಸುದ್ದಿಗಳು ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೇ ಅವಕಾಶ ನೀಡಲು ಚಿಂತನೆ: ಸಚಿವ ಈಶ್ವರ ಖಂಡ್ರೆ

ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೇ ಅವಕಾಶ ನೀಡಲು ಚಿಂತನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನಿನ ಉಲ್ಲಂಘನೆಯಾಗುತ್ತದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಕಾನೂನು ಉಲ್ಲಂಘನೆ ಆಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.


ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲಿ ಉಗುರು ಲಾಕೆಟ್ ಮತ್ತು ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನು ವಿಚಾರವಾಗಿ ಮಾಹಿತಿ ನೀಡಿದರು. ಯಾವುದೇ ವನ್ಯಜೀವಿ ಉತ್ಪನ್ನ ಸಂಗ್ರಹಣೆ, ಸಾಗಾಣಿಕೆ, ದಾಸ್ತಾನು ಮತ್ತು ಬಳಕೆ ಶಿಕ್ಷಾರ್ಹ ಅಪರಾಧ ಎಂದು ಅವರು ಹೇಳಿದರು.


ರಿಯಾಲಿಟಿ ಶೋದಲ್ಲಿ ಹುಲಿ ಉಗುರು ಧರಿಸಿದ್ದ ವಿಚಾರದಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ದೂರು ಬಂದ ಬೇರೆ ಕಡೆ ಕೂಡಾ ನಮ್ಮ ಅಧಿಕಾರಿಗಳು ಹೋಗಿ ಪರಿಶೀಲನೆ ನಡೆಸಿದ್ದಾರೆ. ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಪೂರ್ತಿ ಅರಿವು ಇಲ್ಲ ಎಂದು ನನಗೆ ಅನ್ನಿಸುತ್ತಿದೆ. ಅಕ್ರಮ ವನ್ಯಜೀವಿ ಉತ್ಪನ್ನಗಳನ್ನು ಮರಳಿಸಲು ಕೊನೆಯ ಒಂದು ಅವಕಾಶ ನೀಡಬೇಕು ಎಂಬ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ಇದೆ. ಈ ಕುರಿತು ತಜ್ಞರ ಜೊತೆ ಚರ್ಚಿಸಿ ವರದಿ ಸಲ್ಲಿಸಲು ಈಗಾಗಲೇ ತಂಡ ರಚಿಸಲಾಗಿದೆ. ವರದಿ ಬಂದ ಬಳಿಕ ಸಾರ್ವಜನಿಕರಿಗೆ ಮಾಹಿತಿ ಕೊಟ್ಟು ಶಾಶ್ವತ ಪರಿಹಾರ ಕಂಡುಕೊಳ್ಳಲು ಇಲಾಖೆ ಬದ್ಧವಾಗಿ ಇದೆ ಎಂದು ಖಂಡ್ರೆ ಹೇಳಿದರು.

Join Whatsapp
Exit mobile version