Home ಟಾಪ್ ಸುದ್ದಿಗಳು ಡಿಸೆಂಬರ್’ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ: ಸಚಿವ ರಾಮಲಿಂಗಾ ರೆಡ್ಡಿ

ಡಿಸೆಂಬರ್’ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಡಿಸೆಂಬರ್ ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
ಸರ್ಕಾರದ ಕೋರಿಕೆಯ ಮೇರೆಗೆ ವಾರ್ಡ್ ವಿಂಗಡಣೆಯನ್ನು ಮರುಪರಿಶೀಲಿಸಲು 12 ವಾರಗಳ ಕಾಲಾವಕಾಶವನ್ನು ಜೂನ್ 19 ರಂದು ಹೈಕೋರ್ಟ್ ನೀಡಿತ್ತು. ಈಗಿನ ಮರುವಿಂಗಡಣೆಯಲ್ಲಿ ಲೋಪದೋಷಗಳಿವೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.


ಹೈಕೋರ್ಟ್ ಆದೇಶದ ನಂತರ ಸರ್ಕಾರ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಿದೆ. ಸಮಿತಿಯ ಸದಸ್ಯರು ಬಿಡಿಎ ಆಯುಕ್ತರು, ಬೆಂಗಳೂರು ಉಪ ಆಯುಕ್ತರು ಮತ್ತು ಬಿಬಿಎಂಪಿ ವಿಶೇಷ ಆಯುಕ್ತರು (ಕಂದಾಯ) ಆಗಿದ್ದಾರೆ.

Join Whatsapp
Exit mobile version