ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಬೊಮ್ಮಾಯಿ

Prasthutha|

ಬೀದರ್: ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ತಳಿ ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ಈ ಕುರಿತು ಬಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಹರಡುವಿಕೆ ತಡೆಗಟ್ಟಲು ತಜ್ಞರ ಮಾರ್ಗಸೂಚಿಯಂತೆ ಕ್ರಮ ವಹಿಸಲಾಗಿದೆ. ಕ್ಲಸ್ಟರ್ ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದರು.

ಚಿಕ್ಕಮಗಳೂರಿನಲ್ಲಿ ನಿನ್ನೆ ಕ್ಲಸ್ಟರ್ ಆಗಿದ್ದು, ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಕಾಲ ಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು. 

Join Whatsapp